Advertisement
ಎನ್ನೆಂಸಿ, ಡಿ.26; ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ 94ನೇ ವರ್ಷದ ಹುಟ್ಟು ಹಬ್ಬದ ಆಚರಣೆಯು ಮಾತೃ ಸಂಸ್ಥೆಯಾದ ನೆಹರು ಮೆಮೋರಿಯಲ್ ಕಾಲೇಜಿನ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಬಾಲಚಂದ್ರ ಗೌಡ ಎಂ, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರದ ಹರಿಣಿ ಪುತ್ತೂರಾಯ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ದಿವಂಗತ ಕೆ.ವಿ.ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಹುಟ್ಟು ಹಬ್ಬವನ್ನು ಆಚರಿಸಲಾಯಿತು.

Advertisement