ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ ಕಾರಣ ಬಿಜೆಪಿ ಸಮಾವೇಷವನ್ನು ಮಂಡ್ಯದ ವಿವಿ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಷಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆಚ. ಭದ್ರತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ. ಇಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿ, ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ಬಿಜೆಪಿ ನಾಯಕರ ಸಭೆಗೆ ಸಮಯ ಕಾಯ್ದಿರಿಸಿದ್ದಾರೆ. ನಾಳೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭೇಟಿಯಾಗುವ ಸಾಧ್ಯತೆ ಇದೆ. ನಂತರ ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 1.45ರಿಂದ 3.15ರವರೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಅಧಿಕೃತ ಬುನಾದಿ ಹಾಕಲಿದ್ದಾರೆ. ಮಧ್ಯಾಹ್ನ 3.30ರಿಂದ ಸಂಜೆ 4.30ಕ್ಕೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಡೇರಿ ಉದ್ಘಾಟಿಸಿ, ಸಂಜೆ 4.50ಕ್ಕೆ ಮಂಡ್ಯದಿಂದ ವಿಮಾನದ ಮೂಲ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಡಿಸಿ ಡಾ.ಗೋಪಾಲಕೃಷ್ಣ ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಇಂದು ಮತ್ತು ನಾಳೆ ಎರಡೂ ದಿನಗಳ ಕಾಲ ಈ ರಜೆ ಮುಂದುವರೆಯುತ್ತದೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ​ ಅವರಿಗೆ ಹಲವು ಕಾರಣಗಳಿವೆ. ಈ ಸಮಾವೇಷ ಮಾಡುವ ಮೂಲಕ ಚುನಾವಣೆಗೆ ಸಹಾಯವಾಗಲಿದೆ. ಬಿಜೆಪಿ ನಾಯಕರನ್ನೆಲ್ಲಾ ಒಗ್ಗೂಡಿಸಿ ಮೈಸೂರು ಕ್ಷೇತ್ರದಲ್ಲಿ ಹೆಚ್ಚಿನ ಮತ ಬೇಟೆಗೆ ಅಮಿತ್ ಶಾ ಸಿದ್ಧತೆ ನಡೆಸುತ್ತಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ