ಸುಳ್ಯ: ನಿರ್ವಹಣೆಯ ಕಾರಣದಿಂದ ಸೆ.24ರಂದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ
33ಕೆ.ವಿ. ಕಾವು – ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಯಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 24-09-2024 (ಮಂಗಳವಾರ) ರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.