ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಮಾತನಾಡಿ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಿಸಿಕೊಂಡು ಕೆಲಸ ಮಾಡಬೇಕು ಎಂದು ಕಾರ್ಮಕರಿಗೆ ಕಿವಿ ಮಾತು ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಮುನೀರ್ ನಾವೂರ್ ಅವರನ್ನು ಗೌರವಿಸಲಾಯಿತು. ಪೌರ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ತಿಮ್ಮಪ್ಪ ಪಾಟಾಳಿ, ಕಲ್ಯದರ್ಶಿ ಒ.ಎಸ್.ತಿಮ್ಮಪ್ಪ, ಹಿರಿಯ ಪೌರ ಕಾರ್ಮಿಕ ಗಂಭೀರ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ನ.ಪಂ. ಸಿಬ್ಬಂದಿ ಸುದೇವ ಸ್ವಾಗತಿಸಿ, ಜಯಲಕ್ಷಿ ವಂದಿಸಿದರು. ದಿಲೀಪ್ ಕಾರ್ಯಕ್ರಮ ನಿರೂಪಿಸಿದರು.