ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.