ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.