ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.
ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.
KEA ಕಠಿಣ ರೂಲ್ಸ್ ಏನು?
ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು. ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ
ಪಿಎಸ್‍ಐ ಹುದ್ದೆಗಳ ಆಯ್ಕೆಗೆ 2 ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ನಂತರ ಮಧ್ಯಾಹ್ನ 12-30 ರಿಂದ 2ಗಂಟೆವರೆಗೆ 2 ನೇ ಅವಧಿಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಲ್ಲದೇ ಬೆಳಿಗ್ಗೆ 9-45ರ ನಂತರ ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಆವರಣವನ್ನು ಪ್ರವೇಶಿಸಲು ಅನುಮತಿಸುವುದಿಲ್ಲ.
ಮೊದಲನೆ ಪತ್ರಿಕೆಯ ನಂತರ ಎರಡನೇ ಪತ್ರಿಕೆ ಪ್ರಾರಂಭ ಅಗುವ ಮೊದಲು ಇರುವ ಮೂವತ್ತು ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಹೋಗಲು ಅನುಮತಿಸುವುದಿಲ್ಲ. ಅಭ್ಯರ್ಥಿಗಳು ತಮ್ಮೊಡನೆ ವೈದ್ಯಕೀಯ ಔಷಧಿ, ಮಾತ್ರೆಗಳನ್ನು ಮಾತ್ರ ತೆಗೆದುಕೊಂಡು ಹೋಗಬಹುದು.
ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮೊದಲ ತಪಾಸಣೆಗೆ ಒಳಗಾಗಬೇಕು, ಅಭ್ಯರ್ಥಿಯು ಕೇಂದ್ರದ ಆವರಣವನ್ನು ಪ್ರವೇಶಿಸಿದ ತಕ್ಷಣ, ಪೆಂಡಾಲಿನಲ್ಲಿ ಅವರು ತರುವ ವಸ್ತುಗಳನ್ನು ಇರಿಸಿಕೊಳ್ಳಲು ಮತ್ತು ತಪಾಸಣೆಗೆ ಒಳಗಾಗಲು ವ್ಯವಸ್ಥೆ ಮಾಡಬೇಕು, ಯಾವುದೇ ಕಾರಣಕ್ಕೆ ಪರೀಕ್ಷಾರ್ಥಿಗಳು ಒಮ್ಮೆ ಪೆಂಡಾಲ್‍ನೊಳಗೆ ತಮ್ಮ ವಸ್ತುಗಳನ್ನು ನೀಡಿದ ನಂತರ ಮತ್ತೆ ಮರಳಿ ಪಡೆಯಲು ಅನುಮತಿಸಬಾರದು. ಅಲ್ಲದೇ ಪರೀಕ್ಷೆ ಮುಗಿದ ನಂತರವೇ ಅವರ ವಸ್ತುಗಳನ್ನು ಮರಳಿ ಪಡೆಯಬೇಕು.
ಅದರಲ್ಲೂ ಮುಖ್ಯವಾಗಿ ವಿರಾಮದ ಸಮಯದಲ್ಲಿ ಅವರಿಗೆ ಪ್ರತಿ ಅಭ್ಯರ್ಥಿಗಳಿಗೆ ಬಾಳೆಹಣ್ಣು ಮತ್ತು ಬಿಸ್ಕತ್ತು ಪ್ಯಾಕನ್ನು ಸರಬರಾಜು ಮಾಡಬೇಕು. ಪರೀಕ್ಷೆಯ ಕರ್ತವ್ಯಕ್ಕಾಗಿ ಒಬ್ಬ ಸ್ಕ್ವಾಡ್, ಒಬ್ಬ ವೀಕ್ಷಕ ಮತ್ತು ಒಬ್ಬ ಕಸ್ಟೋಡಿಯನ್‍ರನ್ನು ಗೊತ್ತುಪಡಿಸಲಾಗಿದೆ. ವಿರಾಮದ ವೇಳೆಯಲ್ಲಿಯೂ ಕೊಠಡಿ ಮೇಲ್ವಿಚಾರಕರು ಕೊಠಡಿಯಲ್ಲಿರಬೇಕು, ಯಾವುದೇ ಕಾರಣಕ್ಕೂ ರಿಲೀವರ್ ಇಲ್ಲದೇ ಕೊಠಡಿ ಬಿಡುವಂತಿಲ್ಲ ಎಂದು ತಿಳಿಸಿದರು.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪರೀಕ್ಷೆಯ ದಿನದಂದು ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್‍ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಡಿಮೆ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿμÉೀಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಸ್ತುಗಳ ಪಟ್ಟಿ:
ಡ್ರೆಸ್‍ಕೋಡನ್ನು ಅನುಸರಿಸುವುದರ ಜೊತೆಗೆ, ಪರೀಕ್ಷಾ ಕೇಂದ್ರಕ್ಕೆ ಇಲ್ಲಿ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೆÇೀನ್‍ಗಳು, ಪೆನ್‍ಡ್ರೈವ್‍ಗಳು, ಇಯರ್ ಫೆÇೀನ್‍ಗಳು, ಮೈಕ್ರೋಫೆÇೀನ್‍ಗಳು, ಬ್ಲೂಟೂಥ್ ಸಾಧನಗಳು, ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.
ಅನುಮತಿಸಲಾದ ಕೆಲ ವಸ್ತುಗಳ ವಿವರ;
ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೆÇೀಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಅವುಗಳಲ್ಲಿ ಪಾಸ್‍ಪೆÇೀರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗಿ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ಬ್ಯಾಂಕುಗಳು, ಅಂಚೆ ಕಚೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ.ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆ ಪತ್ರ ಅಥವಾ ಪಟ್ಟಾ ಪುಸ್ತಕ, ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ, ಪಿಂಚಣಿ ಮಂಜೂರಾತಿ ಆಗಿರುವ ಆದೇಶ, ಎನ್‍ಆರ್‍ಇಜಿಎಸ್‍ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ, ಎಲೆಕ್ಟೋರಲ್ ಪೆÇೀಟೋ ಗುರುತಿನ ಚೀಟಿ, ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.