ಸುಳ್ಯ: ಹಲವು ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಜ.16 ರಂದು ಸುಬ್ರಹ್ಮಣ್ಯದಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು. ಸುಬ್ರಹ್ಮಣ್ಯದಲ್ಲಿ ಮದ್ಯಮದವರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ₹300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮಕ್ಕಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗಧಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು. ಸುಬ್ರಹ್ಮಣ್ಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಈಗಾಗಲೇ ಐಸಿಯು, ವೆಂಟಿಲೇಟರ್ ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು. ಆರೋಗ್ಯ ಹಿತದೃಷ್ಟಿಯಿಂದ ಯಾವ ಪ್ರಯತ್ನ ಮಾಡಬೇಕೋ ಅದನ್ನು ಮಾಡಲಾಗುವುದು. ಸುಬ್ರಹ್ಮಣ್ಯ ಸೇರಿದಂತೆ ಎಲ್ಲಾ ಆಸ್ಪತ್ರೆಗೆ 24 ಗಂಟೆಯೂ ವೈದ್ಯರು ಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಸರಕಾರ ಗಮನ ನೀಡಿದೆ. ಒಂದಷ್ಟು ವೈದ್ಯರ ನೇಮಕಾತಿಯೂ ಆಗುತ್ತಿದೆ ಎಂದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ