ನೆಹರೂ ಮೆಮೋರಿಯಲ್ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಜಂಟಿ ಆಶ್ರಯದಲ್ಲಿ ಜನವರಿ 25 ರಂದು ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾಗಿರುವ ಶ್ರೀಮತಿ ರತ್ನಾವತಿ ಡಿ. ಇವರು ವಹಿಸಿದ್ದರು. ರಾಷ್ಟ್ರೀಯ ಮತದಾರರ ದಿನಾಚರಣೆಯ ವಿಶೇಷತೆ ಬಗ್ಗೆ ಉಪನ್ಯಾಸ ಮತ್ತು ಪ್ರತಿಜ್ಞಾ ವಿಧಿಯನ್ನು ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕಿಯಾಗಿರುವ ಶ್ರೀಮತಿ ಮಮತ ಕೆ. ಬೋಧಿಸಿದರು. ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮತದಾರರ ದಿನಾಚರಣೆಯ ಬಗ್ಗೆ ಕಿರುನಾಟಕ ಮತ್ತು ಧ್ಯೇಯ ವಾಕ್ಯಗಳನ್ನು ಪ್ರದರ್ಶಿಸಿದರು. ಕಾಲೇಜಿನ ಭೋದಕ ಮತ್ತು ಭೋದಕೇತರ ವೃಂದ, ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬಿ.ಎ ವಿದ್ಯಾರ್ಥಿಗಳಾದ ಗಾನ, ಲತಾಶ್ರೀ, ಲಾವಣ್ಯ ಮತ್ತು ವರ್ಷಿಣಿ ಇವರು ಚುನಾವಣಾ ಸುಧಾರಣೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿ ಪ್ರತಿನಿಧಿಗಳಾದ ಕಿಶನ್ ಮತ್ತು ದೀಕ್ಷಾ ಅಂತಿಮ ಬಿ. ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಎನ್. ಸ್ವಾಗತಿಸಿ, ಕುಮಾರಿ ರಕ್ಷಿತಾ ಅಂತಿಮ ಬಿ.ಎ. ವಂದಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಶ್ರೀಮತಿ ಅನಂತಲಕ್ಷ್ಮಿ, ಹರಿಪ್ರಸಾದ್, ವಿಷ್ಣುಪ್ರಶಾಂತ್ ಮತ್ತು ದೈಹಿಕ ನಿರ್ದೇಶಕರಾದ ಸೀತಾರಾಮ ಎಂ ಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಕುಮಾರಿ ವೈಶಾಲಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕುಮಾರಿ ಚೈತನ್ಯ ಅಂತಿಮ ಬಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು.
