ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು, ಪೊಲೀಸ್ ಕಾನ್‌ಸ್ಟೆಬಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್ ಲೋಕನಾಥ್ ಅವರ ಪತ್ನಿ ಮಮತಾ, ಪತಿಯಿಂದಲೇ ಕೊಲೆಯಾದವರು.
ಆಕೆಯನ್ನು ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು, ತಕ್ಷಣವೇ ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು. ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್, ಕೊಲೆ ಮಾಡಿದ್ದಾನೆ.