ಮುಂಬೈ (ಅ.9): ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿದ್ದರು. ಆದರೆ, ಬುಧವಾರದ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮುಂಬೈ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು. 

Leave a Reply

Your email address will not be published. Required fields are marked *