ಸುಳ್ಯ: ಮೊಗರ್ಪಣೆ ಹಝ್ರತ್ ಮಾಂಬ್ಳಿ ತಂಙಳ್ ರವರ ಹೆಸರಿನಲ್ಲಿ ಎರಡು ವರ್ಷಗಳಿಗೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಇದೇ ಬರುವ ಫೆಬ್ರವರಿ 24, 25, 26ರಂದು ನಡೆಯಲಿದ್ದು ಈ ಕಾರ್ಯಕ್ರಮದ ಪ್ರಚಾರ ಪತ್ರ ಇಂದು ಬಿಡುಗಡೆಗೊಳಿಸಲಾಯಿತು.
ಇಂದು ಶುಕ್ರವಾರದ ಜುಮುಅ ನಮಾಜ್’ನ ಬಳಿಕ ಮೊಗರ್ಪಣೆ ದರ್ಗಾದಲ್ಲಿ ಎಂ.ಜೆ.ಎಂ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಕಾರ್ಯಕ್ರಮದ ಯಶಸ್ವಿಗಾಗಿ ಪ್ರತ್ಯೇಕ ಪ್ರಾರ್ಥನೆ ನೆರವೇರಿಸಿ ಪ್ರಚಾರ ಪತ್ರವನ್ನು ಮಸ್ಜಿದ್ ಆಡಳಿತ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ರವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಲಾಯಿತು. ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಂಘಟನಾ ಕಾರ್ಯದರ್ಶಿ ಎಸ್ ಸಂಶುದ್ದಿನ್, ಎಚ್ ಐ ಜೆ ಕಮಿಟಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಉಪಾಧ್ಯಕ್ಷ ಸಿ ಎಂ ಉಸ್ಮಾನ್, ಕೋಶಾಧಿಕಾರಿ ಮುಹಮ್ಮದ್ ಆದರ್ಶ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಎಸ್‌ವೈ, ಸಮಿತಿಯ ನಿರ್ದೇಶಕರುಗಳು, ಮದರಸ ಅಧ್ಯಾಪಕ ವೃಂದದವರು ಹಾಗೂ ಜಮಾಅತ್ ವ್ಯಾಪ್ತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ