ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್( ರಿ) ಅರಂತೋಡು ಇದರ 45 ನೇ ವಾರ್ಷಿಕ ಮಹಾಸಭೆಯು ಜೂ.12 ರಂದು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೆರವೇರಿಸಿದರು. ಸಂಸ್ಥೆ ಯ ಕಾರ್ಯದರ್ಶಿ ಫಸೀಲು ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು. ವೇದಿಕೆಯಲ್ಲಿ ಜಮಾ ಅತ್ ಅಧ್ಯಕ್ಷರಾದ ಅಶ್ರಫ್ ಗುಂಡಿ, ಸದರ್ ಮುಅಲ್ಲಿಂ ಸಹದ್ ಫೈಝಿ, ಸಹಾಯಕ ಅಧ್ಯಾಪಕ ಹಾಜಿ ಸಾಜಿದ್ ಅಝ್ಹರಿ , ಸೇರಿದಂತೆ ಸಂಸ್ಥೆಯ ನಿರ್ದೇಶಕರು,ಜಮಾ ಅತ್ ಮಾಜಿ ಅಧ್ಯಕ್ಷರು, ವಿವಿಧ ಅಂಗ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ