ಸುಳ್ಯ: ತಾಲೂಕು ಮೊಬೈಲ್ ರೀಟೇಲರ್ ಅಸೋಷಿಯೇಷನ್ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಫೆಬ್ರವರಿ 15ರಂದು ಸುಳ್ಯ ಗ್ರಾಂಡ್ ಪರಿವಾರ್ (ಉಡುಪಿ ಗಾರ್ಡನ್) ಸಭಾಂಗಣದಲ್ಲಿ ನಡೆಯಿತು.
ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ
ಶಬೀರ್ ಓರ್ಕುಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಿತಿಯ ಸಂಚಾಲಕ ಎಸ್ ವೈ ಅಬ್ದುಲ್ ರಹಿಮಾನ್ ಕಳೆದ ಸಾಲಿನ ಲೆಕ್ಕಪತ್ರ ಮತ್ತು ವರದಿಯನ್ನು ವಾಚಿಸಿದರು. ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು. ಸಭೆಯಲ್ಲಿ ಮೊಬೈಲ್ ವಿತರಕರ ಸಮಸ್ಯೆಗಳ ಬಗ್ಗೆ ಚರ್ಚೆಗಳ ಬಳಿಕ, ನೂತನ ಸಾಲಿನ ಕ್ರಿಯಾ ಯೋಜನೆಗಳನ್ನು ರೂಪಿಸಲಾಯಿತು. ವೇದಿಕೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಅಧ್ಯಕ್ಷ ಶೈಲೇಂದ್ರ ಸರಳಾಯ, ಕಾರ್ಯದರ್ಶಿ ಮದನ್ ಗುತ್ತಿಗಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2023 -24ನೇ ಸಾಲಿನ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಎಸ್ ವೈ ಪಟೇಲ್ ಮೊಬೈಲ್, ಪ್ರಧಾನ ಕಾರ್ಯದರ್ಶಿ ಮದನ್ ಗುತ್ತಿಗಾರು ಅಕ್ಷಯ ಮೊಬೈಲ್ಸ್ , ಕೋಶಾಧಿಕಾರಿಯಾಗಿ ಅಬ್ದುಲ್ ರಹೀಮ್ ಮೊಬೈಲ್ ಗ್ಯಾರೇಜ್, ಉಪಾಧ್ಯಕ್ಷರಾಗಿ ಹಾರಿಸ್ ಸೆಲ್ ಹೌಸ್, ಜೊತೆ ಕಾರ್ಯದರ್ಶಿಯಾಗಿ ಶ್ರೀಕಾಂತ್ ಟಾಕ್ ಶಾಪ್ ಇವರನ್ನು ಆಯ್ಕೆ ಮಾಡಲಾಯಿತು. ಅಬ್ದುಲ್ ರೆಹಮಾನ್ ಎಸ್ ವೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಹಾರಿಸ್ ಸೆಲ್ ಹೌಸ್ ವಂದಿಸಿದರು.