ಎಸ್ ಜೆ ಎಂ (ಸುನ್ನಿ ಜಮ್ಮಿಯ್ಯತುಲ್ ಮುಅಲ್ಲಿಮೀನ್) ಸುಳ್ಯ ತಾಲೂಕು ಸಮಿತಿಯ ಕಾನ್ಫರೆನ್ಸ್ ಕಾರ್ಯಕ್ರಮ, ಶಾಂತಿನಗರ ನೂರು ಇಸ್ಲಾಂ ಮದರಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಮಹಮ್ಮದ್ ಸಕಾಫಿ ಅಲ್ ಹಿಕಮಿ ವಹಿಸಿದ್ದರು. ಮೊಗರ್ಪಣೆ ಮಸೀದಿ ಮುದರ್ರಿಸ್ ಹಾಫಿಲ್ ಶೌಕತ್ ಅಲಿ ಸಕಾಫಿ ದುವಾ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್, ಉಪಾಧ್ಯಕ್ಷ ಸಿ ಎಂ ಉಸ್ಮಾನ್, ಕಟ್ಟಡ ಸಮಿತಿ ಸಂಚಾಲಕ ಅಬ್ದುಲ್ ಸಮದ್ ಹಾಜಿ, ಗಾಂಧಿನಗರ ಮದರಸ ಸದರ್ ಮುಅಲ್ಲಿಂ ಇಬ್ರಾಹಿಂ ಸಕಾಫಿ ಪುಂಡೂರು, ಸ್ಥಳೀಯ ಮದರಸ ಸಮಿತಿ ಅಧ್ಯಕ್ಷ ಹಾಜಿ ಪಳ್ಳಿ ಕುಂಞಿ ಮೊದಲಾದವರು ಉಪಸ್ಥಿತರಿದ್ದರು. ಸಭೆಯಲ್ಲಿ ಸುಳ್ಯ ತಾಲೂಕು ಮಟ್ಟದ ಸುಮಾರು 25ಕ್ಕೂ ಹೆಚ್ಚು ಮದರಸಗಳ ಅಧ್ಯಾಪಕರುಗಳು ಭಾಗವಹಿಸಿದ್ದರು. ಸ್ಥಳೀಯ ಮದರಸ ಅಧ್ಯಾಪಕರಾದ ಅಬ್ದುಲ್ ರಶೀದ್ ಜೈನಿ, ಜಯನಗರ ಮದರಸ ಸದರ್ ಮುಅಲ್ಲಿಂ ಅಬ್ದುಲ್ ಕರೀಂ ಸಕಾಫಿ, ಸಮಿತಿ ಕಾರ್ಯದರ್ಶಿ ಅಬ್ದುಲ್ ಖಾದರ್ (ಅಂದು) ಹಾಗೂ ಸರ್ವ ಸದಸ್ಯರು ಸಹಕರಿಸಿದರು.
Advertisement
Advertisement