ಸುಳ್ಯ: ಕಳೆದ ಕೆಲವು ವರ್ಷಗಳಿಂದ ಅವಿನಾಶ್ ಬಸ್ ನಲ್ಲಿ ನಿರ್ವಾಹಕರಾಗಿ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹಠಾತ್ ಆಗಿ ಸಾವಿಗೀಡಾದ ಘಟನೆ ನಡೆದಿದೆ.

ಮೃತನ ಹೆಸರು ಗುರು ಪ್ರಸಾದ್ ಕುಂಚಡ್ಕ (30.ವ) ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕಳಿಸಿಕೊಡಲಾಗಿದ್ದು, ಆದರೆ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.