ಸುಳ್ಯ: ಇಲ್ಲಿನ ಬೊಳುಬೈಲಿನಲ್ಲಿರುವ ಪೀಸ್ ಸ್ಕೂಲ್ ಇದರ 2022-23 ನೇ ಸಾಲಿನ ವಾರ್ಷಿಕ ಅವಾರ್ಡ್ಸ್ ಡೇ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೌಹೀದ್ ಎಜುಕೇಶನ್ ಮತ್ತು ಚಾರಿಟೇಬಲ್ ಫೌಂಡೇಶನ್ ಅಧ್ಯಕ್ಷ ಕೆ ಅಬೂಬಕ್ಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಇಖ್ರ ಅರಬಿಕ್ ಸ್ಕೂಲ್ ಪ್ರಾಂಶುಪಾಲರಾದ ಮೌಲಾನಾ ಸಾಲಿಂ ಕಲೀಫ ನದ್ವಿ, ಹಾಗೂ ಮುಖ್ಯಸ್ಥರಾದ ಮೌಲಾನ ದಾವೂದ್ ಕಲೀಫ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಅತಿಥಿಗಳಾಗಿ ಉದ್ಯಮಿ ಅಬ್ದುಲ್ಲಾ ಪಿಎಂ ಸುಳ್ಯಕಾರ್ಸ್, ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಎಸ್ ಸಂಶುದ್ದೀನ್, ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ನಗರ ಪಂಚಾಯತ್ ಸದಸ್ಯರುಗಳಾದ ಕೆ ಎಸ್ ಉಮರ್, ಶರೀಫ್ ಕಂಠಿ, ರಿಯಾಜ್ ಕಟ್ಟೆಕಾರ್, ಜಾಲಸೂರ್ ಗ್ರಾಮ ಪಂಚಾಯತಿ ಸದಸ್ಯ ಮುಜಿಬ್ ಪೈಚಾರ್, ಸಂಸ್ಥೆಯ ಉಪಾಧ್ಯಕ್ಷರಾದ ಶಂಸುದ್ದೀನ್, ಟ್ರಸ್ಟಿ ಹನೀಫ್ ಕೆ,ಶಾಲಾ ಅಧ್ಯಾಪಕ ಹ ಸೈನಾರ್, ಉದ್ಯಮಿ ಅಬ್ಬಾಸ್ ಬಿ. ಮೊದಲಾದವರು ಉಪಸ್ಥಿತರಿದ್ದರು.
ಅವಾರ್ಡ್ ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯಲ್ಲಿ ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಪತ್ರ ಹಾಗೂ ಮೊಮೆಂಟೋ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಭಾ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೌಲಾನಾ ಸಲೀಂ ಖಲೀಫಾ ನದ್ವಿ ರವರಿಗೆ ಸಂಸ್ಥೆಯ ವತಿಯಿಂದ ಶಾಲುಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.