ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ.
ಕಾರಿನಲ್ಲಿದ್ದ ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇವರು ಸ್ಥಳೀಯರ ನೆರವಿನಿಂದ ಸಂಪಾಜೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಕಾಞಂಗಾಡ್ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.