Advertisement
ಅಮೆರಿಕದಲ್ಲಿ ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಆರ್.ಆರ್.ಆರ್ ಚಲನಚಿತ್ರದ ನಾಟು ನಾಟು.’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದುಕೊಂಡಿದೆ. ಈ ಹಾಡಿಗೆ ಆಸ್ಕರ್ ಒಲಿದು ಬಂದಿದೆ ಎಂದು ಘೋಷಣೆ ಆಗುತ್ತಿದ್ದಂತೆ ಭಾರತೀಯ ಸಿನಿಮಾ ರಂಗದಲ್ಲಿ ಸಂತಸ ಮೂಡಿದೆ. ಅಂತೂ ಭಾರತೀಯ ಚಿತ್ರರಂಗದ ಪಾಲಿಗೆ ಮತ್ತೊಂದು ಸುವರ್ಣ ದಿನ ಎದುರಾಗಿದೆ. ಎಂ. ಕೀರವಾಣಿ ಸಂಗೀತ ನಿರ್ದೇಶನದ ‘ಆರ್‌ಆರ್‌ಆರ್’ ಚಿತ್ರದ ನಾಟು ನಾಟು. ಹಾಡು ಆಸ್ಕರ್ ಬಾಚಿಕೊಂಡು ಇತಿಹಾಸ ಸೃಷ್ಟಿಸಿದೆ. ಹಾಲಿವುಡ್ ಸಿನಿಮಾ ಹಾಡುಗಳನ್ನೂ ಹಿಂದಿಕ್ಕಿ ಪ್ರಶಸ್ತಿ ಪಡೆದಿರುವುದು ವಿಶೇಷ.
Advertisement