Advertisement
ಸುಳ್ಯ: ಮಾ18 ಇಂದು ಬೆಳಗ್ಗೆ ಸುಳ್ಯ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಚರಣೆಯಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಸುಳ್ಯದ ಕುರುಂಜಿಗುಡ್ಡೆ ಭಾಗದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ರೆಡ್ ಹ್ಯಾಂಡ್ ಆಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆಗಾಗಿ ಆತನನ್ನು ಸುಳ್ಯ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.
Advertisement