ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ಗಾಗಿ ಕಾಯುತ್ತಿದ್ದ ವೇಳೆ ಏಕಾಏಕಿ ಹಿಂಬದಿಯಿಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದೆ, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *