ಸುಳ್ಯ: ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಲ್ಲಿ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ಹಾಗೂ ಶ್ರೀಮತಿ ಮಾಲತಿ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಕೆಲ ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದರಿಂದ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ