ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಒಲವಿನ ಕರ್ನಾಟಕ” ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಸಂದೇಶ ಭಾಷಣ ಮಾಡಿ ” ಕನ್ನಡದ ನಾಡು, ನುಡಿ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿ, ಕನ್ನಡದ ಕಂಪನ್ನು ಎಲ್ಲೆಡೆ
ಹರಡಲು ಎಲ್ಲರೂ ಕಟ್ಟಿಬದ್ಧರಾಗಬೇಕೆಂದು ಕರೆ ನೀಡಿದರು.” ಈ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಸಮಿತಿಯ ಕೋಶಾಧಿಕಾರಿಯಾದ ಸಿದ್ದೀಕ್ ಕೋಡಿಯೆಮ್ಮೆ ಸ್ವಾಗತಿಸಿ, ಮುನೀರ್ ಶೈನ್ ಸುಳ್ಯ ರವರು ಧನ್ಯವಾದ ಅರ್ಪಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ಹಂಚಲಾಯಿತು.