ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯ ಪ್ರಭಾ ಗೌಡ ಚಿಲ್ತಡ್ಕ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಂಗಳೂರು ಜೆಪಿ ನಗರದಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಹಲವು ನಾಯಕರ ಜೊತೆ ದಿವ್ಯ ಪ್ರಭಾ ಗೌಡ ಅವರು ಜೆಡಿಎಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೂರು ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯ ಪ್ರಭಾ ಗೌಡ ಅವರು ಈ ಬಾರಿಯೂ ಟಿಕೆಟ್ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತು ಅವರ ಅಭಿಮಾನಿಗಳ ಒತ್ತಾಯದ ಮೇರೆಗೆ ಜೆಡಿಎಸ್ ಸರ್ಪಡೆಯಾಗುತ್ತದೆ ತಿಳಿದು ಬಂದಿದೆ. ದಿವ್ಯ ಪ್ರಭಾ ಅವರು ಜೆಡಿಎಸ್ ಸೇರ್ಪಡೆಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪುತ್ತೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ದಿವ್ಯ ಪ್ರಭಾ ಅವರಲ್ಲದೇ ರಾಜ್ಯ ಇನ್ನಿತರ ಅನೇಕ ಕಾಂಗ್ರೆಸ್ಸಿನ ನಾಯಕರು ಇಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement