ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ ತೆಕ್ಕಿಲ್ ಶಾಲೆಯಲ್ಲಿ ನಡೆಯಿತು. ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್, ಅಧ್ಯಕ್ಷರಾದ ಉನೈಸ್ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಅಂಬೇಡ್ಕರ್ ಸಾಧನೆಗಳನ್ನು ಮತ್ತು ಜೀವನಾದರ್ಶಗಳನ್ನು ವಿವರಿಸಿದರು.

ಶಾಲಾ ಶಿಕ್ಷಕಿ ಸೌಮ್ಯರವರು ಅಂಬೇಡ್ಕರ್ ಜಯಂತಿ ಮಹತ್ವವನ್ನು ವಿವರಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತಾದ ರಸಪ್ರಶ್ನೆ ಸ್ಪರ್ಧೆ ನಡೆಸಿ, ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಶಿಕ್ಷಕಿಯರಾದ ತಾಹಿರಾ , ಸೌಮ್ಯ , ಅನಿತಾ, ಸಾಧಿಕ್, ಹಬೀಬ್ ರಹಮಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ