ಕಡಬ: ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಕಾರು ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು. ತೂಫಾನ್ ವಾಹನ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ನೆಟ್ಟಣದ ಬಿಳಿಮಲೆ ಎಂಬಲ್ಲಿ ಈ ದುರಂತ ಸಂಭವಿಸಿದೆ. 10 ವರ್ಷದ ಬಾಲಕ, ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಮೃತಪಟ್ಟವರು ಎಂದು ತಿಳಿದುಬಂದಿದೆ. ಅವರ ಹೆಸರು ಇನ್ನೂ ತಿಳಿದುಬಂದಿಲ್ಲ. ಗಂಭೀರ ಗಾಯಗೊಂಡ ಓರ್ವನನ್ನು ಪುತ್ತೂರು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹಗಳನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ