ಪಾಕಿಸ್ತಾನ ನವೆಂಬರ್ 09: ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸ್ಫೋಟದ ಸಮಯದಲ್ಲಿ, ಪೇಶಾವರಕ್ಕೆ ಪ್ಲಾಟ್ಫಾರ್ಮ್ನಿಂದ ಹೊರಡಲು ರೈಲು ಸಿದ್ಧವಾಗಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ . ಕ್ವೆಟ್ಟಾ ಹಿರಿಯ ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು ಆತ್ಮಹತ್ಯಾ ಬಾಂಬ್ ದಾಳಿ ರೀತಿ ಇದೆ ಎಂದು ತಿಳಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಇದ್ದು, ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಗ್ಯಾರಿಸನ್ ಸಿಟಿ ರಾವಲ್ಪಿಂಡಿಗೆ ಪ್ರಯಾಣಿಸಲು ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಗಾಯಗೊಂಡ ಪ್ರಯಾಣಿಕರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ದಾಳಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಇದೆ.