Advertisement

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ 5 ಮಹತ್ವಾಕಾoಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಭಾಗ್ಯಲಕ್ಷ್ಮಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಘೋಷಿಸಿ, ಚಾರಿತ್ರಿಕ ವಾಗಿ ಅನುಷ್ಠಾನ ಗೊಳಿಸಿದ ಮಾನ್ಯ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಗೃಹ ಸಚಿವರಾದ ಪರಮೇಶ್ವರ್, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್ ರವರನ್ನು ಸುಳ್ಯದ ಕಾಂಗ್ರೆಸ್ ಮುಖಂಡರುಗಳು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ರವರು ಮಾತನಾಡಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರ ಬಳಿಗೆ ತಲುಪಿಸಲು ಕಾರ್ಯಕರ್ತರು ಪ್ರಯತ್ನಿಸಬೇಕು ಪ್ರತಿಯೊಂದು ಕಾರ್ಯಕ್ರಮಗಳು ಸರಕಾರ ರಾಜ್ಯಮಟ್ಟದಲ್ಲಿ ಲಾಂಚ್ ಮಾಡಿದಾಗ ಪ್ರತಿ ಹಳ್ಳಿಹಳ್ಳಿಗೂ ಅದರ ಸಂದೇಶವನ್ನು ತಲುಪಿಸಬೇಕು

ದ. ಕ. ಜಿಲ್ಲೆಯಲ್ಲಿ ಪಕ್ಷಕ್ಕೆ ಉಂಟಾಗಿರುವ ಹಿನ್ನಡೆ ತಾತ್ಕಾಲಿಕವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸಂಘಟಿತರಾಗಿ ಕೆಲಸ ಮಾಡಿ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ, ಕೆಪಿಸಿಸಿ ಸಂಯೋಜಕ ಎಸ್ ಸಂಶುದ್ದೀನ್ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ ಮುಸ್ತಫ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಫವಾಜ್ ಕನಕಮಜಲು,

ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಸ್ಥಾಪನೆ ಸಮಿತಿ ಸಂಚಾಲಕ ಕಿರಣ್ ಬುಡ್ಲೆಗುತ್ತು,,
ಮೊದಲಾದವರು ಉಪಸ್ಥಿತರಿದ್ದರು

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ