Advertisement

ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಎಕ್ಸಲೆಂನ್ಸ್ ಶಿ ಕ್ಯಾಂಪಸ್ ಕಂಪ್ಯೂಟರ್ ತರಬೇತಿ ಕೇಂದ್ರ ಇಂದು ಉದ್ಘಾಟನೆಗೊಂಡಿತು.
ನೂತನ ತರಬೇತಿ ಕೇಂದ್ರವನ್ನು ಎಚ್ ಐ ಜೆ ಕಮಿಟಿ ಮೊಗರ್ಪಣೆ ಇದರ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್ ಉದ್ಘಾಟಿಸಿ ಮಾತನಾಡಿ ಸಂಸ್ಥೆಗೆ ಶುಭ ಹಾರೈಸಿದರು.
ಕ್ಯಾಂಪಸ್ ನ ಪ್ರಾಂಶುಪಾಲರು ಹಾಗೂ ಸ್ಥಳೀಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಕಾಫಿ ಪ್ರಾರ್ಥನೆ ನಡೆಸಿದರು.
ಈ ಸಂದರ್ಭದಲ್ಲಿ ತರಬೇತಿ ಕೇಂದ್ರದ ಬಗ್ಗೆ ಮಾಹಿತಿ ನೀಡಿದ ಅವರು ‘ಒಂದು ವರ್ಷ ಪೂರೈಸಿದ ನಮ್ಮ ಈ ಕ್ಯಾಂಪಸ್ ಯಶಸ್ವಿಯಾಗಿ ನಡೆಯುತ್ತಿದ್ದು ವಿದ್ಯಾರ್ಥಿನಿಯರಿಗೆ ಶರೀಅತ್ ವಿದ್ಯಾಭ್ಯಾಸದೊಂದಿಗೆ ಆಧ್ಯಾತ್ಮಿಕ ಶಿಕ್ಷಣ,ಲೌಕಿಕ ಶಿಕ್ಷಣ ಜ್ಞಾನವನ್ನು ನಮ್ಮ ಶಿಕ್ಷಣ ಕೇಂದ್ರದಲ್ಲಿ ನೀಡಲಾಗುತ್ತಿದೆ.ಅಲ್ಲದೆ ವಿದ್ಯಾರ್ಥಿನಿಯರಿಗೆ ಹೋಲಿಗೆ ಕೇಂದ್ರವನ್ನು ಆಯೋಜಿಸುವ ಮೂಲಕ ಸ್ವಾವಲಂಬಿ ಬದುಕಿಗಾಗಿ ಹೊಲಿಗೆ ಯಂತ್ರದ ತರಬೇತಿಯನ್ನು ನೀಡಲಾಗುತ್ತಿದೆ.ಪಿಯುಸಿ ವಿಭಾಗದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ನುರಿತ ಉಪನ್ಯಾಸಕರುಗಳಿಂದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲಾಗುತ್ತಿದೆ.
ಇದೀಗ ನೂತನವಾಗಿ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದ್ದು ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಆಸಕ್ತ ವಿದ್ಯಾರ್ಥಿಗಳು ಕೂಡ ನಮ್ಮ ಸಂಸ್ಥೆಗೆ ಬಂದು ಅತ್ಯಂತ ಕಡಿಮೆ ಶುಲ್ಕವನ್ನು ಪಾವತಿಸಿ ತರಬೇತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ವಿಶೇಷವಾಗಿ ಕನ್ನಡ,ಇಂಗ್ಲಿಷ್,ಅರಬಿಕ್ ಭಾಷೆಗಳ ಟೈಪಿಂಗ್ ತರಬೇತಿಯನ್ನು ನೀಡಲಾಗುತ್ತದೆ. ಈ ಭಾಗದ ವಿದ್ಯಾರ್ಥಿಗಳು ಅರೇಬಿಕ್ ಟೈಪಿಂಗ್ ಕಲಿಯಲು ಕೇರಳಕ್ಕೆ ಹೋಗುತ್ತಿದ್ದು ಇದೀಗ ಸುಳ್ಳದ ನಮ್ಮ ಸಂಸ್ಥೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವ ಅವಕಾಶ ವಿದ್ಯಾರ್ಥಿಗಳಿಗೆ ಲಭಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಮಾಅತ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಉಪಾಧ್ಯಕ್ಷ ಸಿಎಂ ಉಸ್ಮಾನ್,ಕೋಶಾಧಿಕಾರಿ ಮಹಮ್ಮದ್ ಆದರ್ಶ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಎಸ್‌ವೈ, ಕಟ್ಟಡ ಸಮಿತಿಯ ಸಂಚಾಲಕ ಹಾಜಿ ಅಬ್ದುಲ್ ಸಮದ್, ಹಾಗೂ ಸಮಿತಿಯ ಎಲ್ಲಾ ನಿರ್ದೇಶಕರು, ಮಸೀದಿಯ ಸಹ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮದರಸಾ ಮೊಅಲ್ಲಿಂ ವೃಂದದವರು,ಜಮಾಅತ್ ಸದಸ್ಯರು ಭಾಗವಹಿಸಿದ್ದರು
.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ