Advertisement

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ
ಸುಳ್ಯ ತಾಲೂಕು ಅತೀ ಹಿಂದುಳಿದ ಗ್ರಾಮೀಣ ಪ್ರದೇಶವಾಗಿದ್ದು, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಆರಂತೋಡು ಮತ್ತು ಪಂಜ ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ಹುದ್ದೆ ಸೃಷ್ಠಿಸಿ ನೇಮಕಾತಿ ಮಾಡಬೇಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಕೃತ ಪಂಜ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚುವರಿಯಾಗಿ ಜಾಲಸೂರು ಪ್ರದೇಶದಲ್ಲಿ ವಸತಿ ಶಾಲೆ ಪ್ರಾರಂಬಿಸಭೆಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಯವರನ್ನು ಭೇಟಿ ಮನವಿ ಸಲ್ಲಿಸಿದೆ


ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ,ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪoಗಾಯ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡಪಿನಂಗಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಕೂಜುಗೋಡು, ಕಾಯರತೋಡಿ ದೇವಸ್ಥಾನ ಮಾಜಿ ಟ್ರಸ್ಟಿ ಜಗದೀಶ್ ಪಡ್ಪು, ಮೊದಲಾದವರು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ