ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಾವಿನ ಕಾರಿಡಾರ್ ಆಗಿ ಬದಲಾಗುತ್ತಿದೆ. ಸ್ವಿಫ್ಟ್ ಡಿಜೈರ್ ಮತ್ತು ಟಾಟಾ ಹೆಕ್ಸಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಜನರ ಜೀವ ಪಕ್ಷಿ ಹಾರಿಹೋಗಿದೆ. ಎರಡೂ ವಾಹನಗಳು ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದು, ಡಿಸೈರ್ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ನಲ್ಲಿದ್ದ ಮೂವರು ಸ್ಥಳದಲ್ಲಿ ಅಸುನೀಗಿದ್ದಾರೆ, ಕಾರು ಅಪ್ಪಚ್ಚಿಯಾಗಿದೆ. ಮೃತರಲ್ಲಿ ಒಬ್ಬನನ್ನು ನೀರಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಬೇಕಿದೆ. ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಕಾರಿನ ಚಾಲಕ ಮಿತಿಮೀರಿದ ವೇಗದಲ್ಲಿ ಚಾಲನೆ ಮಾಡಿದ್ದರಿಂದ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಟಾಟಾ ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ.
Advertisement
Advertisement