Advertisement

ಅಮೆರಿಕದ ನ್ಯೂಯಾರ್ಕ್​​ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಆವರಣದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನಿಸ್​ ದಾಖಲೆ ಬರೆದಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಆವರಣದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.   ಅತಿಹೆಚ್ಚು ದೇಶಗಳ ಜನರು ಒಂದೇ ಕಡೆ ಸೇರಿ ಯೋಗದಲ್ಲಿ ಭಾಗಿಯಾದ ಹಿನ್ನೆಲೆ ಈ ಯೋಗ ಕಾರ್ಯಕ್ರಮವು ಗಿನ್ನಿಸ್ ದಾಖಲೆ ಪುಟ ಸೇರಿದೆ.  ವಿವಿಧ ದೇಶಗಳ ನೂರಾರು ಪ್ರತಿನಿಧಿಗಳ ನಡುವೆ ಕುಳಿತು ಪಿಎಂ ಮೋದಿ ಇಂದು ಸಂಜೆ ಯೋಗ ಮಾಡಿದ್ದರು.  ಯೋಗ ಪ್ರದರ್ಶನದ ಬಳಿಕ ಯೋಗದಲ್ಲಿ ಪಾಲ್ಗೊಂಡಿದ್ದ ಮಕ್ಕಳನ್ನು ಮೋದಿ ಮಾತನಾಡಿಸಿದರು.  ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನಿನ್ನೆ (ಜೂನ್​ 20, ಮಂಗಳವಾರ) ನ್ಯೂಯಾರ್ಕ್ ನಗರಕ್ಕೆ ಬಂದಿಳಿದಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ