Advertisement
ದೇವರಕೊಲ್ಲಿ : ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಂಟೈನರ್ ಲಾರಿಯ ಬ್ರೇಕ್ ಫೈಲ್ ಕಾರಣ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೊರಟ್ಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

Advertisement