Advertisement


ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 18 ಫ್ಯಾನುಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಜೂ.೨೬ ರಂದು ನೆರವೇರಿತು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ ಅವರು ವಹಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಬದ್ರುದ್ದೀನ್ ಪಟೇಲ್ ಹಾಗೂ ಸದಸ್ಯರುಗಳಾದ ಅಬ್ದುಲ್ ಖಾದರ್ ಪಟೇಲ್, ಶರೀಫ್ ಪಟೇಲ್, ಶಿಂಶಾರ್ ಪಟೇಲ್ ಮತ್ತು ಫಯಾಝ್ ಪಟೇಲ್ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಪಟೇಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಮತ್ತು ಸದಸ್ಯರಿಗೆ ಗೌರವಾರ್ಪಣೆ ನೀಡಲಾಯಿತು. ಟ್ರಸ್ಟ್ ನ ಅಧ್ಯಕ್ಷರು ಶಾಲೆಯ ಅಭಿವೃದ್ಧಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸಂಪತ್ ಜೆ.ಡಿ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ಫರ್ಝಾನ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಎಲ್ಲರಿಗೂ ವಂದಿಸಿದರು

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ