ಎನ್.ಎಂ.ಸಿ, ನ.28; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಜಾಗೃತಿ ಅರಿವು ಕಾರ್ಯಕ್ರಮವು ನವೆಂಬರ್ 23 ಶನಿವಾರದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನೆರವೇರಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿರುವ ಸಂತೋಷ್ ಬಿ ಪಿ ಭಾಗವಹಿಸಿ ವಿದ್ಯಾರ್ಥಿಗಳು ಮಾದಕ ವ್ಯಸನ ಇತ್ಯಾದಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದಂತೆ ಹಾಗೂ ಸೈಬರ್ ಅಪರಾಧ ವಿಚಾರಗಳು ಬಂದಾಗ ಜಾಗೃತಿ ವಹಿಸುವ ಕುರಿತು ಮಾತನಾಡಿದರು ಮತ್ತು ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಅರಿತುಕೊಂಡು ಪಾಲಿಸುವ ಹಾಗೆ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಈ ಸಂದರ್ಭ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದರು. ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ ಪ್ರಾಸ್ತಾವಿಕ ಮಾತುಗಳಿಂದ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್ ವಂದಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಎಂ ಕಾರ್ಯಕ್ರಮ ಸಂಘಟಿಸಿದರು.

ಶ್ರೀಲಯ ದ್ವಿತೀಯ ಬಿ.ಎ ಪ್ರಾರ್ಥಿಸಿ, ಗಾನ ಬಿ.ಡಿ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಭೋದಕ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *