ಸುಳ್ಯ ಹಳೆಯ ಪರ್ಮಿಟ್ ಹೊಂದಿದ್ದ ಸುಳ್ಯ- ಮಂಡೆಕೋಲು ಮಾರ್ಗದಲ್ಲಿ ಸಂಚರಿಸುತ್ತಿದ್ದ
ಬಸ್ಸುಗಳನ್ನು, ಸೋಮವಾರ ಮುಂಜಾನೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ
ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ಈ ಹಿಂದಿನಿಂದಲೂ
ಅಜ್ಞಾವರ ಮಂಡೆಕೋಲು ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ₹ ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಕಟ್ಟಿದೇ ಬಾಕಿ ಮಾಡಿದೆ, ಅದೇ ರೀತಿ ಇನ್ನೊಂದು ಬಸ್ಸು ಕೆಎ-19-ಸಿ-0329 ಎಂಬ ಸಂಖ್ಯೆಯ ಬಸ್ಸು ಸುಮಾರು ಮೂವತ್ತೊಂಬತ್ತು ಸಾವಿರ ಟ್ಯಾಕ್ಸ್ ಉಳಿಕೆಯಾಗಿದ್ದು ಇವುಗಳಲ್ಲಿ ಒಂದು ಡಿಸೆಂಬರ್ ತಿಂಗಳಿನಲ್ಲಿ ಹಾಗೂ ಇನ್ನೊಂದು ಜನವರಿ ತಿಂಗಳಿನಲ್ಲಿ ಅವಧಿ ಮುಗಿದಿದ್ದು ಈ ಬಸ್ಸುಗಳನ್ನು ಆರ್ ಟಿ ಓ ಅಧಿಕಾರಿಗಳಿಗೆ ದೂರು ಬಂದ ಹಿನ್ನಲೆಯಲ್ಲಿ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿ ಈ ಎರಡು ಬಸ್ಸುಗಳನ್ನು ಸೀಝ್ ಮಾಡಲಾಗಿದೆ. ಸೀಝ್ ಆಗಿರುವ ಬಸ್ಸುಗಳು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಪೋಲಿಸ್ ಸುಪರ್ದಿಗೆಗೆ ನೀಡಿದ್ದು ಈ ಕುರಿತು ಕಾನೂನು ರೀತಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಹಾಗೂ ಪರವಾನಿಗೆ ಮಾಲಕರು ನೋಟಿಸ್ ಗೆ ಉತ್ತರಗಳು ಸಲ್ಲಿಸಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದ್ದು, ಆರ್ ಟಿ ಓ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಬಸ್ಸಿನ ಚಾಲಕರು ಯಾರ ಬಸ್ಸು ಹಾಗೂ ಬಸ್ಸಿನ ಯಾವುದೇ ಪರವಾನಿಗೆ ಪತ್ರ ನೀಡದೇ ಇರುವ ಹಿನ್ನಲೆಯಲ್ಲಿ ಈ ಬಸ್ಸುಗಳನ್ನು ಸೀಝ್ ಮಾಡಲಾಗಿದೆ ಎಂದು ಅಧಿಕಾರಿಗಳಾದ ವಿಶ್ವನಾಥ್ ಅಜಿಲ ಹಾಗೂ ದೀಪಕ್ ರವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ