Advertisement

ಬೆಂಗಳೂರು: ರಾಜ್ಯದ ಕರಾವಳಿ (Coastal Karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ (Heay Rain) ಸಾಧ್ಯತೆಯಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.

ಉಡುಪಿಯಲ್ಲಿ ಸುರಿದ ಭಾರೀ ಮಳೆಯಿಂದ ಕಾಪು ತಾಲೂಕು ಇನ್ನಂಜೆ -ಕಲ್ಯಾ ನಡುವೆ ಸಂಪರ್ಕ ಕಡಿತಗೊಂಡಿದೆ. ಮಾರ್ಕೊಡಿ ಹೊಳೆಯ ನೀರಿನಿಂದ ಎರಡು ಗ್ರಾಮದ ಸಂಪರ್ಕ ಕಡಿತಗೊಂಡಿದ್ದು, ನೂರಾರು ಎಕರೆ ಭತ್ತದ ಬೇಸಾಯ ನೀರು ಪಾಲಾಗಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ