Advertisement
ಮೈಸೂರು: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ (T. Narseepur) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ. ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಟಿ. ನರಸೀಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ
Advertisement