ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಪವೀಣ್ ನೆಟ್ಟಾರು ಅವರ ಕೊಲೆಯನ್ನು ಖಂಡಿಸಿ, ಬೆಂಗಳೂರಿನ ಟೌನ್‌ಹಾಲ್ ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು, ಈ ಸಂಧರ್ಭದಲ್ಲಿ ಶಾಂತಿ ಭಂಗ ಮಾಡಲಾಗಿದೆ ಎಂಬ ಆರೋಪದಡಿಯಲ್ಲಿ ದಾಖಲಿಸಲಾಗಿದ್ದ ಪಕರಣಕ್ಕೆ ಸಂಬಂಧಿಸಿದಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಮ್ಯಾಜಿಸ್ಟ್ರೇಟ್ನ್ಯಾ ಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಚಕ್ರವರ್ತಿ ಸೂಲಿಬೆಲೆ ಪರ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ತಮ್ಮ ವಿರುದ್ಧ ನಗರದ ೬ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಮತ್ತು ನ್ಯಾಯಾಲಯ ಹೊರಡಿಸಿರುವ ಸಮನ್ಸ್ ರದ್ದು ಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಚಕ್ರವರ್ತಿ ಸೂಲಿಬೆಲೆ ಪರ ವಾದ ಮಂಡಿಸಿದ ವಕೀಲ ಅರುಣ್ ಶ್ಯಾಮ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿದಾರರಿಗೆ ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರವಾಗಿದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಇದೀಗ ತಡೆ ನೀಡಿ ಆದೇಶ ನೀಡಿದೆ.