ಪುತ್ತೂರು: ಈಗೀನ ಕಾಲವೇ ಹಾಗೇ ಎಲ್ಲಿ ನೋಡಿದರು ಭ್ರಷ್ಟಾಚಾರ, ಅವ್ಯವಹಾರ, ವಂಚನೆ, ಅದೇ ರೀತಿ ಸರಕಾರಿ ಕೆಲಸಗಳು, ಮೊಹರು, ಏನಿದ್ದರು ಕಾನೂನು ಬಾಹಿರವಾಗಿ ಮಾಡುತ್ತಿದ್ದ ಕಛೇರಿಗೆ ಅಧಿಕಾರಿಗಳು‌ ದಾಳಿ‌ ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು ಆಶ್ಚರ್ಯಗೊಂಡಿದ್ದಾರೆ. ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು
ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ಎಂಬುವ ವ್ಯಕ್ತಿ ಇದರ ಮುಖ್ಯ ಪಾತ್ರಧಾರಿ. ನಗರ ಸಭೆಯ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ತಾಲೂಕಿನ‌ ಎಲ್ಲಾ ಪಂಚಾಯತಿಗಳು, ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿತ್ತು. ಪುತ್ತೂರು ಉಪ್ಪಿನಂಡಿ ರಸ್ತೆಯ ಪಡೀಲು ಎಂ. ಎಸ್. ಕಾಂಪ್ಲೆಕ್ಸ್ ಲ್ಲಿ ಕಾರ್ಯಚರಿಸುತ್ತಿರುವ ಬಿಬಿ ಎಲೆಕ್ಟ್ರಿಕ್ ಮತ್ತು ಪ್ಲಂಬಿಂಗ್ ನಲ್ಲಿ ನಕಲಿ ದಾಖಲೆಗಳನ್ನು ಸಿದ್ಧ ಪಡಿಸುತ್ತಿದ್ದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆ ದಾಳಿ ನಡೆದಿದೆ. ಈ ಸಂದರ್ಭ ಪೌರಾಯುಕ್ತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸೀಲುಗಳು ಕೂಡಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ