ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸುವರು. ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ ವಿ ಚಿದಾನಂದ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಗುಜರಾತ್ ಉಧ್ಯಮಿ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್.ಕೆ ನಾಯರ್, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಗಂಗಾಧರ ಮಟ್ಟಿ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಕಾರ್ಯಕ್ರಮಕ್ಕೆ ಮುನ್ನ ಸುಮನಾರಾವ್ ಪುತ್ತೂರು ಹಾಗು ಬಳಗದವರಿಂದ ಸಂಗೀತ ಸಂಭ್ರಮ ವಿಶೇಷ ಕಾರ್ಯಕಮ ನಡೆಯಲಿದೆ. ಪೂ.11.30ರಿಂದ ಹಿರಿಯ ಪತ್ರಕರ್ತ
ಶಿವ ಸುಬ್ರಹ್ಮಣ್ಯ ಕಲ್ಮಡ್ಕ ಅಧ್ಯಕ್ಷತೆಯಲ್ಲಿ ಮಾಧ್ಯಮ ವಿಚಾರ ಸಂಕಿರಣ
ನಡೆಯಲಿದೆ. ವಿಸ್ತಾರ ನ್ಯೂಸ್ ಬೆಂಗಳೂರು ಇದರ ಸುದ್ದಿ ಸಂಪಾದಕ ಹರೀಶ್ ಕೇರ ಹಾಗೂ, ಸುದ್ದಿಯಾನ ಡಿಜಿಟಲ್ ಚಾನೆಲ್ ಸಂಪಾದಕ ಹರಿಪ್ರಸಾದ್ ಅಡ್ಪಂಗಾಯ ವಿಚಾರಮಂಡನೆ ಮಾಡಲಿದ್ದಾರೆ. ಅಪರಾಹ್ನ 2 ರಿಂದ 3ರ ತನಕ ರಂಗಮಯೂರಿ ಕಲಾಶಾಲೆ ಸುಳ್ಯ, ನೂಪುರ‌ ನಾಟ್ಯ ಸಂಸ್ಥೆ ಸುಳ್ಯ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 3 ಗಂಟೆಯಿಂದ 5 ಗಂಟೆಯ ತನಕ ರಾಜ್ಯದ ವಿವಿಧ ಕಡೆಗಳಲ್ಲಿ ಭಾಗವಹಿಸುವ ಸುಳ್ಯದ ಪತ್ರಕರ್ತರ ಸಮ್ಮಿಲನ ನಡೆಯಲಿದೆ.


ಸಮಾರೋಪ ಮತ್ತು ಸನ್ಮಾನ:


ಸಂಜೆ 5ರಿಂದ ಸಮಾರೋಪ ಸಮಾರಂಭ ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸನ್ಮಾನ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿಚ ಎಸ್.ಅಂಗಾರ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ.ರೇಣುಕಾಪ್ರಸಾದ್ ಕೆ.ವಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ.ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಹೆಚ್.ಜಿ. ಭಾಗವಹಿಸಲಿದ್ದಾರೆ. ರಾತ್ರಿ 7.30 ರಿಂದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ