Advertisement
ಸುಳ್ಯ: ಕೇರಳ ರಸ್ತೆ ಸಾರಿಗೆಯ ಮಲಬಾರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಜೂ.21ರಂದು ಮಧ್ಯಾಹ್ನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಸಂಭವಿಸಿದೆ.
ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸು ಮಾವಿನಕಟ್ಟೆ ಬಳಿ ತಲುಪುದಿದ್ದಂತೆ ವಾಹನವೊಂದಕ್ಕೆ ಸೈಡ್ ಕೊಡುವ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಕೆಲವು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
Advertisement