Advertisement

ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ (Students) ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ (Moral Policing) ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ (Panambur Beach) ಬಳಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್‍ಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಬೈಕ್‍ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿತ್ತು. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಬೀಚ್‍ಗೆ 4 ಜನ ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದ ವರದಿಯಾಗಿತ್ತು. ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು (Police) ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ