ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ್ದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ.

ಮಣಿಪಾಲ ಪೊಲೀಸರ ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆ ದಂಧೆಯ ಜಾಲಕ್ಕೆ ಸಿಲುಕಿದ್ದ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಭವಾನಿ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಐವರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಇನ್ನು, ರಕ್ಷಣೆ ಮಾಡಿದ ಐವರು ಯುವತಿಯರಲ್ಲಿ ಮೂವರು ಬೆಂಗಳೂರಿಗೆ ಸೇರಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಹಾಗೂ ಮುಂಬೈ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ. (ಬಂಧಿತ ಆರೋಪಿಗಳು). ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ 4 ಮೊಬೈಲ್‌ ಫೋನ್‌, 1 ಕಾರು , 2 ಮೋಟಾರ್‌ ಸೈಕಲ್‌ ಹಾಗೂ 10,000 ಸಾವಿರ ರೂಪಾಯಿ ನಗದು ಹಣವನ್ನು ಪೊಲೀಸರು ಇದೇ ವೇಳೆ ಸ್ವಾದೀನ ಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆದರೆ ಅನೈತಿಕ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್‌ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದಂತೆ ಪೊಲೀಸರು ಶಾಂತಿನಗರದ ಮನೆಯ ಮೇಲೂ ದಾಳಿ ನಡೆಸಿದ್ದು, ವೇಶ್ಯಾವಾಟಿಕೆಗೆ ಬಳಸಿದ ಮನೆ ಜಪ್ತಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ