ಮಂಗಳೂರು: ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಅಳಪೆ ಮಠದ ಬಳಿಯ ನಿವಾಸಿ ದೀಕ್ಷಿತ್ (32) ಮತ್ತು ಅಳಪೆ ಬಜಾಲ್ ನಿವಾಸಿ ಲಾಯ್ಡ್ ಪಿಂಟೋ (32) ಬಂಧಿತ ಆರೋಪಿಗಳು. ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಜುಲೈ 21ರಂದು ಪಣಂಬೂರು ಬೀಚ್ ಗೆ ಹೋಗಿ ವಾಪಸ್ ಆಗುವ ವೇಳೆ ಆರೋಪಿಗಳು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಬಿಜೈ ಕಾಪಿಕಾಡ್ ನಲ್ಲಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂದಿಸಿದಂತೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement