ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಜುಲೈ 21ರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸ್ನಾನಘಟ್ಟದಲ್ಲಿ ನೀರು ತುಂಬಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಭಾಗದ ನದಿಗಳು ತುಂಬಿ ಹರಿಯುತ್ತಿವೆ. ಈ ಬೆನ್ನಲ್ಲೇ ಪ್ರಸಿದ್ಧ ದೇಗುಲವೊಂದು ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ವಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಭಕ್ತರಿಗೆ ಆಡಳಿತ ಮಂಡಳಿ ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕೆಲವೆಡೆ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ 23ರಂದು ಆರೆಂಜ್ ಅಲರ್ಟ್ ಮತ್ತು 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
Advertisement