ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಚಿಕ್ಕಡಪಲ್ಲಿ ಪೊಲೀಸರಿಂದು ಇಂದು ಬೆಳಗ್ಗೆ ಪೊಲೀಸರು ಮನೆಯ ಬಳಿ ಹೋಗಿ ಅರೆಸ್ಟ್ ಮಾಡಿದ್ದಾರೆ.

ಮಧ್ಯರಾತ್ರಿ ವೇಳೆ ಡಿ.4ರಂದು ಸಂಧ್ಯಾ ಸಿನಿಮಾ ಥಿಯೃಟರ್‌ನಲ್ಲಿ ನಡೆದ ಪ್ರೀಮಿಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಳು. ಆಗ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಅಲ್ಲು ಅರ್ಜುನ್ ಆಗಮಿಸಿದ್ದರು. ನಾಯಕನನ್ನು ನೋಡಲು ಜನರು ಗೇಟ್‌ನತ್ತ ನುಗ್ಗಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿತ್ತು. ಈ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇನ್ನು ಪೊಲೀಸರು ಘಟನೆಗೆ ಸಂಬಂಧಿಸಿದಂತೆ ನೇರವಾಗಿ ಅಲ್ಲು ಅರ್ಜುನ್ ಅವರ ಮೇಲೂ ಎಫ್‌ಐಆರ್ ದಾಖಲಿಸಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದಾರೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಕೆ ಮಾಡಿದ್ದಾರೆ. ಇದೀಗ ಅಲ್ಲು ಅರ್ಜುನ್ ಏಕಾಏಕಿ ಅರೆಸ್ಟ್ ಆಗಿದ್ದರಿಂದ ತೆಲುಗು ಚಿತ್ರರಂಗದ ಜತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅಲ್ಲು ಅರ್ಜುನ್ ಅವರು ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತದಿಂದ ನಡೆದ ಘಟನೆ ಕೇಳಿ ಆಘಾತವಾಯಿತು. ಈ ಸುದ್ದಿಯಿಂದಾಗಿ ನಾನು ಪುಷ್ಪ-2 ಸಿನಿಮಾದ ಸಂಭ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಜನರು ಸಿನಿಮಾ ಮಂದಿರಕ್ಕೆ ಬಂದು ಬಂದು ಸಿನಿಮಾ ನೋಡಿ ಎಂಜಾಯ್ ಮಾಡಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ, ರೇವತಿ ಸಾವು ದುರಂತದ ಘಟನೆಯಾಗಿದೆ. ಅವರ ಕುಟುಂಬಕ್ಕೆ ನಾನು ಸಂತಾಪ ತಿಳಿಸುತ್ತೇನೆ. ಇನ್ನು ನನ್ನ ಪರವಾಗಿ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂ. ನೆರವು ನೀಡಲಿದ್ದೇನನೆ. ಜೊತೆಗೆ, ನಮ್ಮ ಚಿತ್ರ ತಂಡದಿಂದ ಯಾವುದೇ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಅವರ ಕುಟುಂಬಕ್ಕೆ ಕೈಲಾದಷ್ಟು ಸಹಾಯ ಮಾಡುತ್ತೇವೆ. ರೇವತಿ ಕುಟುಂಬವನ್ನು ಶೀಘ್ರ ಭೇಟಿ ಮಾಡುತ್ತೇನೆ ಎಂದು ಹೇಳಿದ್ದರು. ಜೊತೆಗೆ, ಈ ಸಂಬಂಧದ ವಿಡಿಯೋವನ್ನು ಸ್ವತಃ ಅಲ್ಲು ಅರ್ಜುನ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು.

Leave a Reply

Your email address will not be published. Required fields are marked *