Advertisement
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ(ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ) ನಾಳೆಯೂ (25-07-2023) ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಅಲ್ಲಲ್ಲಿ ಸೇತುವೆ ಸೇರಿದಂತೆ ಗುಡ್ಡ ಕುಸಿದು ಹಾನಿಯಾಗುತ್ತಿರುವ ಬಗ್ಗೆಯೂ ವರದಿಯಾಗುತ್ತಿವೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ.
Advertisement