ಸುಳ್ಯ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ


ಹಗ್ಗ ಜಗ್ಗಾಟ ಸ್ಪರ್ಧೆಯ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು. ಈ ನಡುವೆ ಸುಳ್ಯ ತಾಲೂಕಿಗೆ ಒಟ್ಟು ನಾಲ್ಕು ಪ್ರಶಸ್ತಿಗಳು ಒಲಿದಿದೆ‌.

ಪುರುಷ ವಿಭಾಗದಲ್ಲಿ ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜು ಮತ್ತು ಮಹಿಳಾ ವಿಭಾಗದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪುರುಷರ ವಿಭಾಗದ‌ ಸ್ಪರ್ಧೆಯಲ್ಲಿ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜು ಪ್ರಥಮ ಸ್ಥಾನ,
ದ್ವಿತೀಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ,
ತೃತೀಯ ಆಳ್ವಾಸ್ ಕಾಲೇಜು ಮೂಡುಬಿದ್ರೆ,
ಚತುರ್ಥ ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಪಡೆದುಕೊಂಡಿತು.

ಮಹಿಳಾ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ
ಪ್ರಥಮ ಆಳ್ವಾಸ್ ಕಾಲೇಜು, ಮೂಡಬಿದಿರೆ ಪಡೆದುಕೊಂಡರೆ, ದ್ವಿತೀಯ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ತೃತೀಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು, ಚತುರ್ಥ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ತನ್ನದಾಗಿಸಿಕೊಂಡಿತು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ