ಸುಳ್ಯ ತಾಲೂಕಿನಲ್ಲಿ ಒಟ್ಟು ಎರಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳು ಇವೆ, ಒಂದು ಬೆಳ್ಳಾರೆಯಲ್ಲಿ ಮತ್ತೊಂದು ಸುಳ್ಯ ನಗರದ ಗಾಂಧಿನಗರ ದಲ್ಲಿ ಕಾರ್ಯಾಚರಿಸುತ್ತಿದೆ. ಶಾಲಾ ಕೊಠಡಿ, ಶೌಚಾಲಯ, ಸ್ಮಾರ್ಟ್ ಕ್ಲಾಸ್ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಮತ್ತು ಸಮಗ್ರ ಅಭಿವೃದ್ಧಿಗಾಗಿ ಸರಕಾರದಿಂದ ಅನುದಾನ ಮಂಜೂರು ಮಾಡಿಸಿ ಕೊಡಬೇಕೆಂದು ಇತ್ತೀಚೆಗೆ ದ. ಕ. ಜಿಲ್ಲೆಗೆ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ. ಎಂ. ಮುಸ್ತಫ ಭೇಟಿ ಯಾಗಿ ಮನವಿ ಸಲ್ಲಿಸಿದರು. ಹಾಗೂ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ರವರು ಆರಂತೋಡು ಭೇಟಿ ನೀಡಿದ ಸಂದರ್ಭ ಇವರಲ್ಲೂ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಪಂಗಾಯ ಕೆಪಿಸಿಸಿ ಮುಖ್ಯ ವಕ್ತಾರ ಟಿ. ಎಂ. ಶಹೀದ್, ಸುಳ್ಯ ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್,ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಮೊದಲಾದ ವರು ಉಪಸ್ಥಿತರಿದ್ದರು.
Advertisement
Advertisement